ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ, ಈ ಹೇಳಿಕೆಗೆ ನಾನು ಬದ್ಧ: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ : ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕುರಿತು‌ ಮೊನ್ನೆ ಬೆಂಗಳೂರಿನಲ್ಲಿ‌ ನಡೆದ ಹಾನಗಲ್ ಕುಮಾರಸ್ವಾಮೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದೆ. ಆ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ‌ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ. ಹೀಗಾಗಿ ಈ ವಿಚಾರ ಹೊರಗೆ ಬಂದಿದೆ. ಲಿಂಗಾಯತರು ಅನ್ಯಾಯವನ್ನು ಅನುಭವಿಸಿದ್ದಾರೆ. ಲಿಂಗಾಯತ ಅಧಿಕಾರಿಗಳಿಗೆ ಸರಿಯಾದ ಹುದ್ದೆಗಳನ್ನು ನೀಡಿಲ್ಲ ಎಂದು ಅವರು ಹೇಳಿದರು.
ಸರ್ಕಾರದ ಸಚಿವ ಸಂಪುಟದಲ್ಲಿ 7 ಜನ ಲಿಂಗಾಯತ ಸಚಿವರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನಾನು ಅಧಿಕಾರಿಗಳ ಬಗ್ಗೆ ಹೇಳಿದ್ದೇನೆಯೇ ಹೊರತು ಸಚಿವರ ಬಗ್ಗೆ ಹೇಳಿಲ್ಲ. ಮೊನ್ನೆ ಬೆಂಗಳೂರಲ್ಲಿ ನೀಡಿದ ಹೇಳಿಕೆಗೆ ಈಗಲೂ ಬದ್ಧ ಎಂದು ಹೇಳಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement