ಕಾರವಾರ: ಭಾರೀ ಗಾಳಿ-ಮಳೆ ಮುನ್ಸೂಚನೆ, ಸಮುದ್ರ ಪ್ರಕ್ಷುಬ್ಧ, ಕಡಲತೀರಕ್ಕೆ ಮರಳಿದ ಮೀನುಗಾರಿಕಾ ಬೋಟ್‌ಗಳು

ಕಾರವಾರ : ವಾಯುಭಾರ ಕುಸಿತದಿಂದ ಹವಮಾನ ವೈಪರೀತ್ಯದಿಂದಾಗಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರಿಕಾ ಬೋಟ್‌ಗಳು ಕರಾವಳಿ ತೀರದ ಕಡಲತೀರಗಳಲ್ಲಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿದೆ. ಹಾಗೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ಸಹ ವಾಪಸ್ಸಾಗುತ್ತಿವೆ.
ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್‌ಗಳನ್ನು ಅಳವಡಿಸಲಾಗಿದೆ. ಎರಡ್ಮೂರು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ ಕಡಲು ಪ್ರಕ್ಷುಬ್ಧಗೊಂಡಿದೆ. ಎರಡ್ಮೂರು ದಿನದಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಜೋರಾಗಿ ಗಾಳಿ ಬೀಸುತ್ತಿದೆ. ಹೀಗಾಗಿ ಮೀನುಗಾರಿಕೆ ಬೋಟ್‌ಗಳು ನಗರದ ಕಡಲತೀರಕ್ಕೆ ಆಗಮಿಸಿ ಲಂಗರು ಹಾಕಿವೆ. ಸುಮಾರು 300ಕ್ಕೂ ಹೆಚ್ಚು ಬೋಟ್‌ಗಳು ಟ್ಯಾಗೋರ್ ಹಾಗೂ ಬಂದರು ತೀರ ಪ್ರದೇಶಗಳಲ್ಲಿ ಲಂಗರು ಹಾಕಿವೆ.

ಭಾರೀ ಗಾಳಿಯಿಂದಾಗಿ ಆಂಕರ್ ತುಂಡಾಗಿ ಎರಡು ಮೀನುಗಾರಿಕಾ ಬೋಟ್‌ಗಳು ಕಾರವಾರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ದಡಕ್ಕೆ ಅಪ್ಪಳಿಸಿವೆ ಎಂದು ವರದಿಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಇನ್ನು 3 ರಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಸಂಭಾವ್ಯ ವಿಕೋಪದಂತಹ ಘಟನೆಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇ.ಡಿ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement