ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ನವದೆಹಲಿ: ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ಆತನ ತಲೆಗೆ 3 ಲಕ್ಷ ರೂ.ಘೋಷಿಸಲಾಗಿತ್ತು.
ದೆಹಲಿಯಲ್ಲಿ ಐಸಿಸ್ ಮಾಡ್ಯೂಲ್‌ನ ಸುಳಿವು ಸಿಕ್ಕಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ವಿದೇಶಿ ಮೂಲದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಈ ಮಾಡ್ಯೂಲ್ ಯೋಜಿಸಿತ್ತು.

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಈತ ದೆಹಲಿಯ ನಿವಾಸಿಯಾಗಿದ್ದು, ಪುಣೆ ಪೊಲೀಸರ ವಶದಿಂದ ಪರಾರಿಯಾಗಿದ್ದ. ಬಂಧನಕ್ಕೂ ಮುನ್ನ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ.
ಶಹನವಾಜ್ ಸೇರಿದಂತೆ ಮೂವರೂ ಶಂಕಿತ ಭಯೋತ್ಪಾದಕರನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ತಯಾರಿಸಲು ಬಳಸುವ ದ್ರವ ರಾಸಾಯನಿಕ ಸೇರಿದಂತೆ ಹಲವಾರು ದೋಷಾರೋಪಣೆಯ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಎನ್‌ಐಎ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು. ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ವೈದ್ಯರು ಸೇರಿದಂತೆ ಐವರನ್ನು ಇದುವರೆಗೆ ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರತಿವರ್ಷ ಜೂನ್ 25ರಂದು ʼಸಂವಿಧಾನ ಹತ್ಯಾ ದಿವಸʼ ಆಚರಣೆ; ಅಮಿತ್ ಶಾ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement