ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಅವರ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌. ಚೇತನ ಸೇರಿದಂತೆ ನಾಲ್ವರ ಮೇಲೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಎಡಿಜಿಪಿ) ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ಉಪ ನಿರ್ದೇಶಕರು ಪತ್ರ ಬರೆದಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಇತರೆ ಹಿಂದುಳಿದ ಜಾತಿ (ಮೀಸಲಾತಿ ಅಥವಾ ನೇಮಕಾತಿ ಇತರ) ಕಾಯ್ದೆ–1990’ ಕಾಯ್ದೆಯಡಿ ಎಂ.ಆರ್‌.ಚೇತನ, ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ದಾರಕೇಶ್ವರಯ್ಯ, ಬಿ.ಎಂ.ವಾಗೀಶ ಮತ್ತು ಅವರ ಪತ್ನಿ ಪುಷ್ಪಾ ಎಂಬುವರ ಜಾತಿ ಪ್ರಮಾಣಪತ್ರಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ರದ್ದುಪಡಿಸಿದ್ದರು. ಈ ಸಂಬಂಧ 2023ರ ಏಪ್ರಿಲ್‌ 19 ಮತ್ತು ಜೂನ್‌ 27ರಂದು ಆದೇಶ ಹೊರಡಿಸಿದ್ದರು.
ಈ ಆದೇಶಗಳ ಅನ್ವಯ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಗೆ ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ಉಪ ನಿರ್ದೇಶಕರು ಪತ್ರ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement