ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಬೆಂಗಳೂರು : ನೈಸ್‌ ರಸ್ತೆಯಲ್ಲಿ ಅಪಘಾತ, ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ-ಮಗು ಸಾವು

ಬೆಂಗಳೂರು : ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಸೋಮಪುರ ಬಳಿ ಇಂದು, ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಸುತ್ತಿದ್ದ ತಾಇ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಇನ್ನೊಂದು ಮಗು ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ . ಕಾರು ಡಿಕ್ಕಿಯಾದ ರಭಸಕ್ಕೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಕಾರಿನಲ್ಲಿದ್ದ ತಾಯಿ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಕಾರಿನೊಳಗೇ ದಹನವಾಗಿದೆ. ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕರು ಇವರನ್ನು ಕಾರಿನಿಂದ ಹೊರಗೆ ಎಳೆದು ತೆಗೆದಿದ್ದಾರೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement