ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ.
ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು “ಇಂಡಿಯಾ”ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ನಡೆ ಅಭಿನಂದನೀಯ. ಹಿಂದುಳಿದ ,ಶೋಷಿತ ವರ್ಗ ಸೇರಿದಂತೆ ಎಲ್ಲಾ ವರ್ಗಗಳ ಉನ್ನತಿಕರಣಕ್ಕೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ತಿಳಿಸಿದ್ದಾರೆ.
ಜಾತಿ ಗಣತಿ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ಧವಾಗಿರುವ ಜಾತಿ ವರದಿಯನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಗೋಪಾಲಕೃಷ್ಣ ಭಟ್ಟ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement