ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ, ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಎಫ್‌ಐಆರ್‌ಗಳು ದಾಖಲಾಗಿದೆ ಹಾಗೂ 60 ಮಂದಿಯನ್ನು ಬಂಧಿಸಲಾಗಿದೆ.
ಈ ಕುರಿತು ಎಸ್‌ಪಿ ಮಿಥುನಕುಮಾರ ಅವರು ಪ್ರತಿಕ್ರಿಯಿಸಿದ್ದು, ಗಲಭೆಯಲ್ಲಿ ಒಂದು ಕಾರು, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಗಲಭೆಯಲ್ಲಿ 7 ಮನೆ ಗಾಜು ಪುಡಿಪುಡಿಯಾಗಿದೆ. ಸೋಮವಾರ ಬೆಳಗ್ಗೆಯಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. 144 ಸೆಕ್ಷನ್ ಇರುವ ಕಾರಣ ಅಹಿತಕರ ಘಟನೆ ನಡೆಯುತ್ತಿಲ್ಲ ಎಂದು ಹೇಳಿದರು.ಬಂಧಿತ ಆರೋಪಿಗಳಲ್ಲಿ ಕೆಲವರನ್ನು ಶಿವಮೊಗ್ಗ, ಇನ್ನು ಕೆಲವರನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಭಾನುವಾರ ಬೆಳಿಗ್ಗೆ ಈದ್​ ಮಿಲಾದ್ ಮೆರವಣಿಗೆಗಾಗಿ ನಗರದ ರಾಗಿಗುಡ್ಡದಲ್ಲಿ ತಲ್ವಾರ್​ ಮಾದರಿ ಕಟೌಟ್ ವಿಚಾರಕ್ಕೆ ಗೊಂದಲ ಸೃಷ್ಟಿಯಾಗಿತ್ತು. ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಕಟೌಟ್ ಹಾಕಲಾಗಿದ್ದು ಜನರು ಪ್ರತಿಭಟನೆ ಮಾಡಿದ್ದರು. ನಂತರ ಈದ್‌-ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಹಾಗೂ ರಾಗಿಗುಡ್ಡ ಸುಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement