ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Salumarada Timmakka) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಗೆ ಉಸಿರಾಟದ ಸಮಸ್ಯೆಯಾದ ಅವರನ್ನು ಮಂಗಳವಾರ (ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ ಅವರು ಮಾಹಿತಿ ನೀಡಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಅವರು ವಾಸಾಗಿದ್ದಾರೆ. ಕಳೆದ ಎರಡು ದಿನಗಳಿಂದ ವಾತಾವರಣ ಬದಲಾವಣೆಯಿಂದ ಅವರಿಗೆ ಉಸಿರಾಟ ಸಮಸ್ಯೆ ಉಂಟಾಗಿತ್ತು. ಮಂಗಳವಾರ ಮಧ್ಯಾಹ್ನಉಸಿರಾಟದ ಸಮಸ್ಯೆ ಉಲ್ಬಣವಾಗುತ್ತಿದ್ದಂತೆಯೇ ಹೆಚ್ಚಾಗುತ್ತಿದ್ದಂತೆ ಅವರನ್ನು ಬಳ್ಳೂರು ಮನೆಯಿಂದ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement