ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ 300 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದ ಬಡ ಮಹಿಳೆಯರಿಗೆ ನೀಡುವ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಸರ್ಕಾರ ಬುಧವಾರ (ಅಕ್ಟೋಬರ್ 4) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಹೇಳಿದ್ದಾರೆ.
ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದರು. ಮಾರುಕಟ್ಟೆ ಬೆಲೆ 903 ರೂ.ಗಳಿಗೆ ಹೋಲಿಸಿದರೆ ಕೇಂದ್ರ ಸಚಿವ ಸಂಪುಟದ ನಿರ್ಧಾರದ ನಂತರ ಅವರು ಈಗ 603 ರೂ.ಳಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಗಳಿಂದ 300 ರೂ.ಗಳಿಗೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ ಠಾಕೂರ್, ಉಜ್ವಲ ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನು 100 ರೂ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಉಜ್ವಲ ಫಲಾನುಭವಿಗಳಿಗೆ ಹೆಚ್ಚುವರಿ ಸಹಾಯಧನದ ನಿರ್ಧಾರವು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement