ಬೆಂಗಳೂರಿನಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ಬಗ್ಗೆ ಚರ್ಚೆ : ಸಭೆಯ ದಿನಾಂಕ ಬದಲು, ಅಕ್ಟೋಬರ್‌ 9ಕ್ಕೆ ಸಭೆ ನಿಗದಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ಕುರಿತು ಚರ್ಚಿಸಲು ಶಿಕ್ಷಣ ಇಲಾಖೆಯು ಅಕ್ಟೋಬರ್ 5ರಂದು ಕರೆದಿದ್ದ ಸಭೆಯನ್ನು ಕಾಋಣಾಂತರಗಳಿಂದ ಅಕ್ಟೋಬರ್ 9ಕ್ಕೆ ಮುಂದೂಡಿದೆ.
ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಶಾಲಾ ಸಮಯ ಬದಲಾವಣೆ ಮಾಡುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿತ್ತು. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಅಕ್ಟೋಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಈ ಮೊದಲು ಶಿಕ್ಷಣ ಇಲಾಖೆಯು ಸಭೆ ನಿಗದಿ ಮಾಡಿತ್ತು. ಆದರೆ ಈಗ ಅದನ್ನು ಬದಲಾವಣೆ ಮಾಡಿ ಅಕ್ಟೋಬರ್ 9ರ ಅಪರಾಹ್ನ 3:30ಕ್ಕೆ ಸಭೆ ನಿಗದಿ ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೇತೃತ್ವದಲ್ಲಿ ನಡೆಯುವ ಮಹತ್ವದ ಸಭೆಯಲ್ಲಿ ಸಭೆಯಲ್ಲಿ ನಗರದ ಶಾಲೆಗಳ ಸಮಯ ಪರಿಷ್ಕರಣೆ ಕುರಿತು ಚರ್ಚೆ ನಡೆಯಲಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಶಿಕ್ಷಣ ತಜ್ಞರು, ಸಾರಿಗೆ ಇಲಾಖೆ ಅಧಿಕಾರಿಗಳು, ಸಂಚಾರಿ ಪೊಲೀಸರು, ಪೋಷಕರ ಸಂಘ, ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸದಸ್ಯರು ಭಾಗವಹಿಸಲಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement