ಶಿರಸಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು

ಶಿರಸಿ: ಪುಟ್ಟ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.
ಶಿರಸಿಯ ಸಿ.ಪಿ.ಬಜಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಬಾಲಕಿಯನ್ನು ಅನುಶ್ರೀ ರಾಜಶೇಖರ ನೂಲಾಶೆಟ್ಟರ (೩) ಎಂದು ಗುರುತಿಸಲಾಗಿದೆ. ಈಕೆಯ ತಾಯಿ ಬಾವಿಯಿಂದ ನೀರು ತರಲು ತೆರಳಿದ್ದ ವೇಳೆ ಬಾಲಕಿಯೂ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಆಡುತ್ತ ಬಾವಿಯ ಸಮೀಪಕ್ಕೆ ಬಂದ ಮಗು ಬಾವಿಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಇದನ್ನು ನೋಡಿದ ತಾಯಿ ಜೋರಾಗಿ ಕೂಗಿಕೊಂಡಾಗ ಸ್ಥಳೀಯರು ಆಗಮಿಸಿ ಬಾವಿಗೆ ಇಳಿದು ಮಗುವನ್ನು ಮೇಲಕ್ಕೆ ಎತ್ತಿದ್ದಾರೆ, ಆದರೆ ಅಷ್ಟರಲ್ಲಾಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ನಗರ ಠಾಣೆ ಪಿ.ಎಸ್.ಐ ರಾಜಕುಮಾರ ಉಕ್ಕಲಿ ಭೇಟಿ ನೀಡಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement