ಇನ್ಮುಂದೆ ಗ್ರಾಮ ಪಂಚಾಯಿತಗಳ ಬಾಪೂಜಿ ಕೇಂದ್ರಗಳಲ್ಲೇ ಆದಾಯ, ಜಾತಿ ಪ್ರಮಾಣ ಪತ್ರ ಸೇರಿದಂತೆ 66 ಸೇವೆಗಳು ಲಭ್ಯ : ಮಾಹಿತಿ ಇಲ್ಲಿದೆ…

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯತಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಈಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ 22 ಸೇವೆಗಳ ಜತೆಗೆ 5 ಪ್ರಮುಖ ಇಲಾಖೆಗಳ 44 ಸರ್ಕಾರಿ ಸೇವೆಯನ್ನು ಪಡೆಯಬಹುದಾಗಿದೆ. ಈ ಮೂಲಕ 66 ಸೇವೆಗಳು ಲಭ್ಯವಾಗಲಿದೆ..
ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಪ್ರಿಯಾಂಕ ಖರ್ಗೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ.
ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಶಿರಸಿ : ಇಂದಿನಿಂದ (ಜು.11) ಸಾಂಪ್ರದಾಯಿಕ ತರಕಾರಿ ಬೀಜ ಮೇಳ-ಮಲೆನಾಡು ಮೇಳ

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ ಸೇವೆಗಳು
ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತ ದೃಡೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಡೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಡೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಡೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಡೀಕರಣ ಪತ್ರ, ನಿರುದ್ಯೋಗಿ ದೃಢಿಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಡೀಕರಣ ಪತ್ರ, ಸಣ್ಣ /ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂದು ದೃಢಿಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ. ಬೋನಫೈಡ್ ದೃಡಿಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆದಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢಿಕರಣ ಪತ್ರ, ಹೈದ್ರಾಬಾದ್-ಕರ್ನಾಟಕ ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ, ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪೆನ್ಷನ್ ಸೇರಿದಂತೆ ವಿವಿಧ ಸೇವೆಗಳು ಸಿಗಲಿವೆ.

ಪ್ರಮುಖ ಸುದ್ದಿ :-   ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement