ಎನ್‌ಸಿಪಿಯ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಲೋಕಸಭಾ ಸದಸ್ಯತ್ವದಿಂದ ಅನರ್ಹ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮೊಹಮ್ಮದ್ ಫೈಜಲ್ ಪಿಪಿ ಅವರನ್ನು ಬುಧವಾರ (ಅಕ್ಟೋಬರ್ 4) ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮಾಡಿದ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ನಂತರ ಲೋಕಸಭೆಯ ಸಚಿವಾಲಯದಿಂದ ಈ ಕ್ರಮ ಬಂದಿದೆ.
ಕೇರಳದ ಗೌರವಾನ್ವಿತ ಉಚ್ಚ ನ್ಯಾಯಾಲಯದ ದಿನಾಂಕ 03.10.2023 ರ ಆದೇಶದ ದೃಷ್ಟಿಯಿಂದ, ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದ ಲಕ್ಷದ್ವೀಪ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಮಹಮ್ಮದ್ ಫೈಜಲ್ ಪಿಪಿ ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಲೋಕಸಭೆಯ ಸಚಿವಾಲಯದ ಬುಲೆಟಿನ್ ಹೇಳಿದೆ.

ಫೈಝಲ್ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿದ್ದು ಇದು ಎರಡನೇ ಬಾರಿ. ಜನವರಿ 25 ರಂದು ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ಪಿ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಮಹಮ್ಮದ್ ಫೈಜಲ್ ಮತ್ತು ಇತರ ಮೂವರನ್ನು ಅಪರಾಧಿಗಳೆಂದು ಘೋಷಿಸಿತು ಮತ್ತು ಮೂವರಿಗೂ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತು. ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.
ಕೇರಳ ಹೈಕೋರ್ಟ್ ಈ ಪ್ರಕರಣದಲ್ಲಿ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಫೈಝಲ್ ಅವರ ಲೋಕಸಭಾ ಸದಸ್ಯತ್ವದ ಅನರ್ಹತೆಯನ್ನು ಮಾರ್ಚ್ 29 ರಂದು ಹಿಂತೆಗೆದುಕೊಳ್ಳಲಾಯಿತು. ಆಗಸ್ಟ್ 2023 ರಲ್ಲಿ, ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪವು ಸಲ್ಲಿಸಿದ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ 'ಡೆಂಗೆ' ಹೆಚ್ಚಳ ; ಎಲ್ಲ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement