ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇ.ಡಿ. ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ಮನೆ, ಕಚೇರಿ, ಫಾರಂ ಹೌಸ್‌ಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತಾಲೂಕಿನ ಹಣಗೆರೆಕಟ್ಟೆ ಬಳಿ ಕರಕುಚ್ಚಿಯ ಫಾರಂಹೌಸ್, ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸ ಹಾಗೂ ಕರಿಕುಚ್ಚಿ ಗ್ರಾಮದ ನಿವಾಸದ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು 5 ವಾಹನಗಳಲ್ಲಿ ಬಂದ 15ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇ.ಡಿ. ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ನಕಲಿ ಬಂಗಾರದ ಆಭರಣ ಅಡವಿಟ್ಟ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇತ್ತೀಚೆಗಷ್ಟೇ ಬ್ಯಾಂಕಿನಿಂದ ವರದಿ ಪಡೆದುಕೊಂಡಿತ್ತು ಎನ್ನಲಾಗಿದೆ. ಆರ್.ಎಂ.ಮಂಜುನಾಥಗೌಡ ಬೆಂಗಳೂರಿನಲ್ಲಿ ಇದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement