ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ.
ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸರಿಗೆ ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಅನುಮಾನವಾಯಿತು. ನಂತರ ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದುದರ ಬಗ್ಗೆ ಬಾಯ್ಬಿಟ್ಟಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಗುರುಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ರೈಲಿನಲ್ಲಿ ರಾತ್ರಿ ಮಲಗಿರುತ್ತಿದ್ದ ವೃದ್ಧರು ಹಾಗೂ ಮಹಿಳಾ ಪ್ರಯಾಣಿಕರೇ ಇವರ ಗುರಿಯಾಗಿದ್ದರು. ಅವರು ಚಿನ್ನಾಭರಣಗಳನ್ನು ದೋಚಲು ಮೊದಲು ಯೋಜನೆ ರೂಪಿಸುತ್ತಿದ್ದರು. ನಂತರ ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾದಾಗ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದರಂತೆ. ಕೊಂಕಣ ರೈಲಿನಲ್ಲಿ ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು – ಮುಂಬೈ ವರೆಗೂ ಇವರು ಕಳ್ಳತನ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. ರೈಲು ಪ್ರಯಾಣಿಕರಿಂದ ಕದ್ದಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement