ವಿವಾಹೇತರ ಸಂಬಂಧ ಹೊಂದಿರುವ ಮಹಿಳೆಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಬೆಂಗಳೂರು: ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ ಅವರಿದ್ದ ನ್ಯಾಯಪೀಠವು ಈ ರೀತಿ ಅಭಿಪ್ರಾಯಪಟ್ಟು ಪತ್ನಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ, ಪ್ರಾಮಾಣಿಕರಲ್ಲದಿದ್ದಾಗ ಪತಿಯು ಜೀವನಾಂಶ ಕೊಡಬೇಕು ಎಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಪತಿಯ ಕಡೆಯಿಂದ ಯಾವುದೇ ಜೀವನಾಂಶ ನಿರೀಕ್ಷಿಸಲಾಗದು ಎಂದು ಪೀಠ ತಿಳಿಸಿದೆ. ಹಾಗೂ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಪರಿಷ್ಕರಣೆ ಅರ್ಜಿಯನ್ನು ತಿರಸ್ಕರಿಸಿತು.

ಸಲ್ಲಿಸಿದ ಮೌಖಿಕ ಮತ್ತು ದಾಖಲೆಯ ಸಾಕ್ಷ್ಯವು ಅರ್ಜಿದಾರರು ತನ್ನ ಪತಿಗೆ ಪ್ರಾಮಾಣಿಕವಾಗಿಲ್ಲ ಹಾಗೂ ಮತ್ತೊಬ್ಬರೊಂದಿಗೆ ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆ ಮತ್ತು ಎಲ್ಲಾ ಸಮಯದಲ್ಲೂ ಆತನೊಂದಿಗೆ ಇರುತ್ತಿದ್ದರು ಎಂದು ಸ್ಪಷ್ಟಪಡಿಸುತ್ತದೆ. ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ ಜೀವನಾಂಶವನ್ನು ಕೇಳುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪೀಠ ಹೇಳಿದೆ.
ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಆದರೆ, ಸಾಕ್ಷಿಗಳ ಪ್ರಕಾರ ಮತ್ತೊಂದು ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ. ಎಲ್ಲ ಸಂದರ್ಭಗಳಲ್ಲಿಯೂ ಅವನೊಟ್ಟಿಗೆ ಇರುತ್ತಿರುವ ಬಗ್ಗೆ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ಆದ ಕಾರಣ ಅರ್ಜಿದಾರರ ಪರಿಹಾರ ನೀಡಲಾಗದು ಎಂದು ಪೀಠ ಹೇಳಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ಈ ಮೊದಲು, ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ಸಲ್ಲಿಸಿದ ಪತ್ನಿಯ ಅರ್ಜಿಯ ಮೇರೆಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಾಯಿದೆಯ ಸೆಕ್ಷನ್ 18 ರ ಅಡಿಯಲ್ಲಿ ಮಹಿಳೆಗೆ 1,500 ರೂ. ನಿರ್ವಹಣೆ ಮತ್ತು 1,000 ರೂ. ಬಾಡಿಗೆ ಭತ್ಯೆ ಮತ್ತು 5,000 ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿತ್ತು. ಮ್ಯಾಜಿಸ್ಟ್ರೇಟ್ ಆದೇಶವನ್ನು ಪತಿಯು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅದು ಮ್ಯಾಜಿಸ್ಟ್ರೇಟ್ ನೀಡಿದ ಆದೇಶವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement