ಪ್ರಕಟಣೆ ನಿಲ್ಲಿಸಿದ ಕನ್ನಡ ವಾರಪತ್ರಿಕೆ ʼಮಂಗಳʼ

ಕನ್ನಡ ಓದುಗರ ಮನೆಮಾತಾಗಿದ್ದ ‘ಮಂಗಳ’ ವಾರ ಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಲಿದೆ ಎಂದು ವರದಿಯಾಗಿದೆ. ಕನ್ನಡ ಪತ್ರಿಕಾರಂಗದಲ್ಲಿ ಅನೇಕ ದಶಕಗಳಿಂದ ಗುರುತಿಸಿಕೊಂಡಿದ್ದ ಮಂಗಳ ವಾರಪತ್ರಿಕೆ ಇನ್ನುಮುಂದೆ ಪ್ರಕಟವಾಗುವುದಿಲ್ಲ.
ಈ ಕುರಿತು ಮಂಗಳ ವಾರ ಪತ್ರಿಕೆ ಸಂಪಾದಕರು ಪ್ರಕಟಣೆ ನೀಡಿದ್ದು, ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು ತಿಳಿಸಿದ್ದಾರೆ. ಸರಿಸುಮಾರು ನಾಲ್ಕು ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪತ್ರಿಕೆ ತನ್ನ ಯಾನ ನಿಲ್ಲಿಸಿರುವುದರಿಂದಾಗಿ ಅನೇಕ ಓದುಗರ ನಿರಾಸೆಗೊಂಡಿದ್ದಾರೆ.
ಕೊರೊನಾ ಹೊಡೆತ, ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡ ನಂತರವೂ. ಮೂರು ವರ್ಷಗಳ ಕಾಲ ಮಂಗಳ ವಾರಪತ್ರಿಕೆ ಮುನ್ನಡೆಸಿದ್ದೇವೆ.ಇದೀಗ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಳ್ಳಲಿದೆ ಎಂದು ತಿಳಿಸಲಾಗಿದೆ.
ಮಂಗಳ ಪತ್ರಿಕೆ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿತ್ತು. ಆರಂಭಿಕ ಸಂಪಾದಕರಾದ ಬಾಬು ಕೃಷ್ಣಮೂರ್ತಿಯವರು ಓದುಗರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ವಾರಪತ್ರಿಕೆಯನ್ನು ರೂಪಿಸಿದ್ದರು. ಗ್ರಾಮೀಣ ಭಾಗದಲ್ಲಿ ಪತ್ರಿಕೆಯ ಓದು ಅಗಾಧವಾಗಿತ್ತು. ಮಕ್ಕಳಿಗಾಗಿ ಇದ್ದ ಬಾಲಮಂಗಳ ಬಹಳ ಜನಪ್ರಿಯವಾಗಿತ್ತು. ಹೆಚ್ಚಾಗಿ ಮಧ್ಯಮ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಪತ್ರಿಕೆ ರೂಪುಗೊಳ್ಳುತ್ತಿತ್ತು. ಅನೇಕ ಬರಹಗಾರರಿಗೆ ಇದು ಮೊದಲ ಮೆಟ್ಟಿಲಾದ ಪತ್ರಿಕೆಯಾಗಿದೆ.‌ ಬದಲಾದ ಕಾಲಘಟ್ಟದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ.

ಪ್ರಮುಖ ಸುದ್ದಿ :-   ಕೆಆರ್‌ಎಸ್ ಭರ್ತಿಯಾಗಿಲ್ಲ ; ಆದ್ರೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸ್ಸು

4.4 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement