ಆರು ತಿಂಗಳ ಜೈಲು ಶಿಕ್ಷೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ ಮೆಟ್ಟಿಲೇರಿದ ನಟಿ ಜಯಪ್ರದಾ

ಚೆನ್ನೈ: ತಮ್ಮ ಮಾಲೀಕತ್ವದ ಚಿತ್ರಮಂದಿರದ ಉದ್ಯೋಗಿಗಳ ವಿಮಾ ಪಾಲಿನ ಹಣದ ಬಾಕಿ ಮೊತ್ತ ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತನಗೆ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಬಾಲಿವುಡ್‌ ನಟಿ ಮತ್ತು ಮಾಜಿ ಸಂಸದೆ ಜಯಪ್ರದಾ ಅವರು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
ಜಯಪ್ರದಾ ಅವರು ತಮ್ಮ ಮಾಲೀಕತ್ವದ ಚಿತ್ರಮಂದಿರದ ಉದ್ಯೋಗಿಗಳ ವಿಮಾ ಕಂತಿನ ಬಾಕಿಯನ್ನು ತಮಿಳುನಾಡಿನ ನೌಕರರ ರಾಜ್ಯ ವಿಮಾ ನಿಗಮಕ್ಕೆ (ಇಎಸ್‌ಐಸಿ)ಪಾವತಿ ಮಾಡಬೇಕಿತ್ತು.
ಆದರೆ ಪ್ರಸ್ತುತ ನಿಷ್ಕ್ರಿಯಗೊಂಡಿರುವ ಚಿತ್ರಮಂದಿರದ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ನೌಕರರ ರಾಜ್ಯ ವಿಮಾ ನಿಗಮಕ್ಕೆ (ಇಎಸ್‌ಐಸಿ) ಪಾವತಿಸಬೇಕಾದ ಶಾಸನಬದ್ಧ ಆದೇಶ ಪಾಲಿಸಲು ವಿಫಲವಾಗಿದ್ದ ಹಿನ್ನೆಲೆಯಲ್ಲಿ ಕೋರ್ಟ್‌ ಅವರಿಗೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿತ್ತು.

ಜಯಪ್ರದಾ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದ ನ್ಯಾ. ಜಯಚಂದ್ರನ್‌ ಅವರ ಪೀಠವು ಪ್ರತಿ ಅಫಿಡವಿಟ್‌ ಸಲ್ಲಿಸಲು ಇಎಸ್‌ಐಸಿಗೆ ಒಂದು ವಾರದ ಕಾಲಾವಕಾಶ ನೀಡಿತು.
ಅಷ್ಟರೊಳಗೆ ಬಾಕಿ ಇರುವ ₹ 37.68 ಲಕ್ಷ ಪಾವತಿಸಬಹುದೇ ಎಂದು ಸ್ಪಷ್ಟಪಡಿಸುವಂತೆಯೂ ನ್ಯಾಯಮೂರ್ತಿಗಳು ಜಯಪ್ರದಾ ಪರ ವಕೀಲರನ್ನು ಕೇಳಿದರು. ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ 11 ರಂದು ನಡೆಯಲಿದೆ.
ಇಎಸ್‌ಐ ಕಾಯಿದೆಯ ಸೆಕ್ಷನ್ 40ರ ಪ್ರಕಾರ, ಪ್ರಧಾನ ಉದ್ಯೋಗದಾತನು ಉದ್ಯೋಗದಾತರ ಕೊಡುಗೆಯ ಪಾಲನ್ನು ಮತ್ತು ಉದ್ಯೋಗಿಗಳ ಕೊಡುಗೆಯ ಪಾಲನ್ನು ಪಾವತಿಸಬೇಕಾಗುತ್ತದೆ. ಉದ್ಯೋಗಿಗಳ ವೇತನದಿಂದ ಆ ಕೊಡುಗೆಯ ಮೊತ್ತವನ್ನು ವಸೂಲಿ ಮಾಡಲು ಪ್ರಧಾನ ಉದ್ಯೋಗದಾತ ಅರ್ಹನಾಗಿರುತ್ತಾನೆ.

ಪ್ರಮುಖ ಸುದ್ದಿ :-   ವಿಭವಕುಮಾರ 7-8 ಬಾರಿ ನನ್ನ ಕಪಾಳಕ್ಕೆ ಹೊಡೆದಿದ್ದಾನೆ, ಹೊಟ್ಟೆಗೆ ಒದ್ದಿದ್ದಾನೆ....: ಎಫ್‌ಐಆರ್‌ನಲ್ಲಿ ಸಂಸದೆ ಸ್ವಾತಿ ಮಲಿವಾಲ್ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement