ರಾಜ್ಯದ ಈ ಜಿಲ್ಲೆಗಳಲ್ಲಿ ಐದಾರು ದಿನ ಮಳೆಯ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಹಾಗೂ ಕೆಲವಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಕಳೆದ 24 ಗಂಟೆಯಲ್ಲಿ ಅತ್ಯಧಿಕ 68.5 ಮಿಮೀ ಮಳೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement