ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಕೆಕೋಡ ಗ್ರಾಮದಲ್ಲಿ ಒಂದೇ ಮನೆಯ ಮೂವರು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.
ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎನ್ನಲಾಗಿದ್ದು, ಮತ್ತೊಬ್ಬರು ಗೋಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ (34) ಸಜೀವ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ (32) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆಯಿಂದ ಗ್ರಾಮದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಮತ್ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ