ಕುತೂಹಲ ಮೂಡಿಸಿದ ದೇವೇಗೌಡ-ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು (HD DeveGowda) ಅವರನ್ನು ಭಾನುವಾರ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ವೇಳೆಯೇ ಈ ಭೇಟಿ ನಡೆದಿರುವುದುಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಈ ವೇಳೆ ಮುಖ್ಯಮಂತ್ರಿಗಳು, ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಕೆಲ ಕಾಲ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಜೊತೆ ಸಚಿವ ಭೈರತಿ ಸುರೇಶ ಹಾಗೂ ಎಂಎಲ್​ಸಿ ಗೋವಿಂದರಾಜ ಇದ್ದರು.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement