ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ : ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು : ಬೆಂಗಳೂರಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ದರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋದಾಮು ಮಾಲೀಕ ರಾಮಸ್ವಾಮಿ ಹಾಗೂ ನಿರ್ವಹಣೆ ಮಾಡುತ್ತಿದ್ದ ರಾಮಸ್ವಾಮಿ ಪುತ್ರ ನವೀನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟಾಕಿ ಗೋದಾಮು ಬೆಂಕಿ ದುರಂತದಲ್ಲಿ ಮಾಲೀಕರ ಪುತ್ರ ನವೀನ್‌ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಸಂಜೆಯವರೆಗೂ ಇಡೀ ಕಟ್ಟಡಕ್ಕೆ ವ್ಯಾಪಿಸಿ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಶನಿವಾರ ರಾತ್ರಿ ಭೇಟಿ ನೀಡಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement