ಅತ್ತಿಬೆಲೆ : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ: 12 ಜನರು ಸಾವು

ಬೆಂಗಳೂರು : ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದರಂತದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.
ಘಟನೆ ನಡೆದ ವೇಳೆ 30-40 ಕಾರ್ಮಿಕರು ಗೋದಾಮಿನಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 11 ಮಂದಿ ಮೃತಪಟ್ಟಿದ್ದು, ಗಾಐಗೊಂಡ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ನಿವಾರ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ದುರಂತ ಸಂಭವಿಸಿದೆ. ಈ ಘಟನೆಯಿಂದಾಗಿ ಅತ್ತಿಬೆಲೆಯಿಂದ ಚಂದಾಪುರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಅನ್‌ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ದೀಪಾವಳಿಗಾಗಿ ಕೋಟ್ಯಂತರ ರೂಪಾಯಿ ವ್ಯವಹಾರ ಮಾಡುವ ದೊಡ್ಡ ಪಟಾಕಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಕ್ಕಪಕ್ಕದ ಕೆಲ ಅಂಗಡಿಗಳಿಗೂ ವ್ಯಾಪಿಸಿದೆ. ಕ್ಯಾಂಟರ್, 2 ಬೊಲೆರೋ, 4 ಬೈಕ್ ಸುಟ್ಟು ಭಸ್ಮವಾಗಿವೆ. ಅವಘಡಕ್ಕೆ ಇನ್ನೂ ಸಹ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಯಲ್ಲಿ ಗೋದಾಮು, ಒಂದು ಲಾರಿ, ಟೆಂಪೋ, ನಾಲ್ಕು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಪಟಾಕಿ ಗೋದಾಮಿನಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿಶಾಮಕ ದಳದ ಐದಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಬೆಂಕಿ ನಂದಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಗೋದಾಮಿನ ಮಾಲೀಕ ಸಹ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement