ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಲ್ಲಿ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರ (ಅಕ್ಟೋಬರ್‌ 10) ಚಾಮರಾಜನಗರ, ಕೊಡಗು, ಹಾಸನ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಅಕ್ಟೋಬರ್‌ 11ರಂದು ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಈ ವೇಳೆ ಕರಾವಳಿಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಸೋಮವಾರ ಮೈಸೂರು ಹಾಗೂ ಬೆಂಗಳೂರಿನ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಜೋರಾಗಿ ಮಳೆಯಾಗಿದೆ. ಸಂಜೆಗೆ ಸುರಿದ ಭಾರಿ ಮಳೆಗೆ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement