ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ ನಡೆದಿದ್ದು, ಬೆಂಕಿಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ.

ಗಾಯಗೊಂಡಿರುವ ಐವರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಶೇಷ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಒಂಬತ್ತು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರ ಕುಟುಂಬಗಳಿಗೆ ನಗದು ಪರಿಹಾರ ಘೋಷಿಸಿದ್ದಾರೆ.ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ತನ್ನ ಸಂಪುಟದ ಸಹೋದ್ಯೋಗಿಗಳಾದ ಎಸ್ ಎಸ್ ಶಿವಶಂಕರ್ ಮತ್ತು ಸಿವಿ ಗಣೇಶನ್ ಅವರನ್ನು ನಿಯೋಜಿಸಿರುವುದಾಗಿ ಸ್ಟಾಲಿನ್ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಹಾಗೂ ಸಾಧಾರಣ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದರು.

ಪ್ರಮುಖ ಸುದ್ದಿ :-   ಜಯಲಲಿತಾ ಜನ್ಮದಿನವನ್ನು ವಿಶಿಷ್ಟ ಶೈಲಿಯಲ್ಲಿ ಆಚರಿಸಿದ ಎಐಎಡಿಎಂಕೆ : ಅವರ ಎಐ ರಚಿತ ಧ್ವನಿ ಕ್ಲಿಪ್ ಬಿಡುಗಡೆ | ಆಲಿಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement