ಫ್ರಿಡ್ಜ್ ಕಂಪ್ರೆಸರ್ ಸ್ಫೋಟ : ಮೂವರು ಮಕ್ಕಳು ಸೇರಿದಂತೆ 5 ಮಂದಿ ಸಾವು

ಜಲಂಧರ : ಪಂಜಾಬ್‌ನ ಜಲಂಧರದ ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರೆಲ್ಲರೂ ಗಂಬೀರ ಗಾಯದಿಂದ ಮೃತಪಟ್ಟಿದ್ದಾರೆ. ಮೃತರನ್ನು ಯಶಪಾಲ ಘಾಯ್ (70), ರುಚಿ ಘಾಯ್ (40), ಮಾನಸಾ (14), ದಿಯಾ (12) ಮತ್ತು ಅಕ್ಷಯ (10) ಎಂದು ಗುರುತಿಸಲಾಗಿದೆ.
ಸ್ಫೋಟದ ಮಾದರಿಗಳನ್ನು ಸಂಗ್ರಹಿಸಲು ಮತ್ತು ಸ್ಫೋಟದ ನಿಖರವಾದ ಕಾರಣವನ್ನು ನಿರ್ಧರಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಲಂಧರದ ಅವತಾರ ನಗರದಲ್ಲಿನ ಮನೆಯೊಂದರಲ್ಲಿ ಸ್ಫೋಟದ ರೀತಿಯ ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು, ನಂತರ ನಾವು ತಕ್ಷಣ ಸ್ಥಳಕ್ಕೆ ತಲುಪಿದ್ದೇವೆ. ಅಪಘಾತದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ನಾವು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಸಿದ್ದೇವೆ” ಎಂದು ಜಲಂಧರ್ ಹೆಚ್ಚುವರಿ ಉಪ ಆಯುಕ್ತರು ತಿಳಿಸಿದ್ದಾರೆ. ಪೊಲೀಸ್ (ADCP) ಆದಿತ್ಯ ಹೇಳಿದರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement