ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಎರಡು ದಿನಗಳಿಂದ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಈಗ ಮತ್ತೆ ಇಂದಿನಿಂದ ಎರಡ್ಮೂರು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, ದಕ್ಷಿಣ ಒಳನಾಡಿನ ಐದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರ್ಮಾಣವಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement