43 ಹೆಚ್ಚುವರಿ ಬರಪೀಡಿತ ತಾಲೂಕು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈಗ ರಾಜ್ಯ ಸರ್ಕಾರವು 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಹೆಚ್ಚುವರಿಯಾಗಿ ಘೋಷಿಸಿದೆ.
ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ಈ ಹಿಂದೆ ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಆದೇಶ ಹೊರಡಿಸಿತ್ತು. ಈಗ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿದೆ.
ಬರಪೀಡಿತ ತಾಲೂಕುಗಳು….
ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.
ಸಾಧಾರಣ ಬರಪೀಡಿತ ತಾಲೂಕುಗಳು…
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement