ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಆದರೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮ, ಇತರ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು, ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು. ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ ತಮಿಳುನಾಡಿನ 14 ಜನರು ಸಜೀವ ದಹನವಾಗಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಪಟಾಕಿ ಅಂಗಡಿಗಳ ಲೈಸೆನ್ಸ್ ಮೇಲೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಬೇಕು. ದೀಪಾವಳಿ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ಪಟಾಕಿ ಮಾರಾಟಕ್ಕೆ ಒಮ್ಮೆ ಪರವಾನಗಿ ಪಡೆದರೆ ಐದು ವರ್ಷದ ತನಕ ನವೀಕರಣಕ್ಕೆ ಇರುತ್ತಿತ್ತು. ಆದರೆ ಈಗ ಪ್ರತಿ ವರ್ಷವೂ ಹೊಸದಾಗಿ ಲೈಸೆನ್ಸ್ ತೆಗೆದುಕೊಳ್ಳಬೇಕು. ಆದೇಶ ಪಾಲನೆ ಮಾಡದಿದ್ದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋದಾಮುಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.

ಪ್ರಮುಖ ಸುದ್ದಿ :-   ಮಂಗನ ಕಾಯಿಲೆಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬ ಮಹಿಳೆ ಸಾವು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement