ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಎಂದು ಕರೆಯಲ್ಪಡುವ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಗೆ ಸೇರಿದವರಾಗಿದ್ದಾರೆ.
“ಕಾಶ್ಮೀರಿ ಪಂಡಿತ ದಿವಂಗತ ಸಂಜಯ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ” ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.
ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ ನಲ್ಲಿ ತಿಳಿಸಿದ್ದಾರೆ.
ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ ಬಳಿಕ ಎನ್‌ಕೌಂಟರ್ ಆರಂಭವಾಯಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement