ಗೋಕರ್ಣ : ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಜೀವ ರಕ್ಷಕ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ವಿದ್ಯಮಾನ ಉತ್ತರಕನ್ನಡ ಜಿಲ್ಲೆಯ ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.
ಪ್ರವಾಸಕ್ಕೆ ಬಂದ ವೇಳೆ ಒಂದೇ ಕುಟುಂಬದ ಏಳು ಪ್ರವಾಸಿಗರು ನೀರಿನಲ್ಲಿ ಇಳಿದಿದ್ದು, ಈ ವೇಳೆ ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. ಕೂಡಲೇ ಜೀವ ರಕ್ಷಕ ಪಡೆ ಯುವಕರು ಸಮುದ್ರಕ್ಕೆ ಧುಮುಕಿ ಏಳು ಮಂದಿಯನ್ನು ರಕ್ಷಿಸಿದ್ದಾರೆ.
ಹುಬ್ಬಳ್ಳಿಯ ಕುಟುಂಬವೊಂದು ಗೋಕರ್ಣಕ್ಕೆ ಪ್ರವಾಸ ಬಂದಿತ್ತು. ಈ ವೇಳೆ ಎಲ್ಲರೂ ನೀರಿಗೆ ಇಳಿದಿದ್ದರು. ಸಮುದ್ರದಲ್ಲಿ ಆಟವಾಡುತ್ತಿರುವಾಗ ನೀರಿನಲ್ಲಿ ಮುಳುಗುವ ಪರಿಸ್ಥಿತಿ ಎದುರಾಯಿತು. ಇದನ್ನು ನೋಡಿದ ಲೈಫ್ ಗಾರ್ಡ್ಗಳು ಕಾರ್ಯಾಚರಣೆಗೆ ಇಳಿದು ಏಳು ಪ್ರವಾಸಿಗರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಹುಬ್ಬಳ್ಳಿಯಿಂದ ಬಂದಿದ್ದ ಪ್ರವಾಸಿಗರಾದ ಪರಶುರಾಮ (44), ಅಕ್ಷರ(14), ರುಕ್ಮಿಣಿ (38), ಧೀರಜ (14), ಖುಷಿ (13), ದೀಪಿಕಾ (12), ನಂದಕಿಶೋರ (10) ಅವರನ್ನು ರಕ್ಷಣೆ ಮಾಡಲಾಗಿದೆ.
ಇದೇ ವೇಳೆ, ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಮತ್ತೊಬ್ಬರನ್ನೂ ರಕ್ಷಣೆ ಮಾಡಲಾಗಿದೆ. ಪಿಂಡ ಪ್ರಧಾನ ಮಾಡಲು ಬಂದಿದ್ದ ಹುಬ್ಬಳ್ಳಿಯ ಎಲ್.ವಿ. ಪಾಟೀಲ (30) ಎಂಬವರು ಸಮುದ್ರಕ್ಕೆ ಇಳಿದಿದ್ದರು. ಅವರು ನೀರಿನಲ್ಲಿ ಮುಗಳುತ್ತಿರುವುದನ್ನು ಗಮನಿಸಿದ ಶಿವಪ್ರಸಾದ ಅಂಬಿಗ, ಲೋಕೇಶ ಹರಿಕಂತ್ರ ಎಂಬುವವರು ಕೂಡಲೇ ಸಮುದ್ರಕ್ಕೆ ಜಿಗಿದು ರಕ್ಷಣೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement