ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ತೂರಾಟ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ (ಅಕ್ಟೋಬರ್‌ ೧೦) ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಸತ್ಯಮೂರ್ತಿ ಎಂಬಾತ ಕಲ್ಲು ಎಸೆದಿದ್ದ. ಈ ಸಂಬಂಧ ಸರಸ್ವತಿಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ನಂತರ ತನಿಖೆ ನಡೆಸಿದ ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ವಿಧಾನಸಭೆ ಚುನಾವಣೆ ವೇಳೆ ಈತ ವೋಟಿಂಗ್ ಮೆಷಿನ್ ಒಡೆದು ಹಾಕಿದ್ದನು ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement