ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಶಿಫಾರಸು ಮಾಡಿದೆ.
ಬುಧವಾರದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ತಮಿಳುನಾಡು ಪ್ರತಿದಿನ 13 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸುವಂತೆ ಮನವಿ ಮಾಡಿತು. ಕರ್ನಾಟಕದಲ್ಲಿ ನೀರಿನ ಅಭಾವದ ಕುರಿತು ಕರ್ನಾಟಕದ ಅಧಿಕಾರಿಗಳು ಮನವರಿಕೆ ಮಾಡಿದರು. ಎರಡು ಕಡೆ ವಾದ ಆಲಿಸಿದ ಸಮಿತಿ ಅಕ್ಟೋಬರ್ 16ರಿಂದ 31ರ ವರೆಗೆ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫರಾಸು ಮಾಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement