ಆಘಾತಕಾರಿ ವೀಡಿಯೊ | ಕಾರು ದರೋಡೆ ಮಾಡಿ ರಸ್ತೆಯಲ್ಲಿ ಚಾಲಕನನ್ನು ಎಳೆದೊಯ್ದು ಸಾಯಿಸಿದ ದರೋಡೆಕೋರರು

ನವದೆಹಲಿ: ಬೆಚ್ಚಿ ಬೀಳಿಸಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನೊಬ್ಬನನ್ನು ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸುಮಾರು 1.5 ಕಿಲೋಮೀಟರ್ ವರೆಗೆ ಕಾರೊಂದು ಎಳೆದೊಯ್ದು ನಂತರ ಆತ ಪ್ರಾಣ ಕಳೆದುಕೊಂಡಿರುವ ಘಟನೆ ದೆಹಲಿಯ ಮಹಿಪಾಲ್‌ಪುರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು 43 ವರ್ಷದ ವಿಜೇಂದ್ರ ಎಂದು ಗುರುತಿಸಲಾಗಿದ್ದು, ವಸಂತಕುಂಜ ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದೆ. ದರೋಡೆ ಯತ್ನ ಮಾರಣಾಂತಿಕವಾಗಿ ಪರಿಣಮಿಸಿದೆ.
ದಾರಿಹೋಕರು ಹೆದ್ದಾರಿಯಲ್ಲಿ ವ್ಯಕ್ತಿಯ ಶವ ಬಿದ್ದಿರುವುದನ್ನು ಕಂಡು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಾಳುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ ಚಾಲಕ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದರು. ರಸ್ತೆಯಲ್ಲಿ ಎಳೆದೊಯ್ದ ಪರಿಣಾಮ ತೀವ್ರವಾದ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಹರಿಯಾಣದ ಫರಿದಾಬಾದ್‌ನ ಮೃತ ಕಾರು ಚಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಚಾಲಕನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಇದರಿಂದಾಗಿ ಮೃತಪಟ್ಟಿದ್ದಾರೆ. ದರೋಡೆ ಯತ್ನವನ್ನು ವಿರೋಧಿಸಿದ ನಂತರ ಅಪರಿಚಿತ ವ್ಯಕ್ತಿಗಳು ಚಾಲಕನನ್ನು ಹೆದ್ದಾರಿಯಲ್ಲಿ ಎಳೆದೊಯ್ದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಕೆಲವು ದರೋಡೆಕೋರರು ಬಿಜೇಂದ್ರ ಅವರ ಕಾರನ್ನು ದರೋಡೆ ಮಾಡಲು ಪ್ರಯತ್ನಿಸಿದರು. ಆರೋಪಿಗಳು ಚಾಲಕನ ಮೇಲೆ ಹಲ್ಲೆ ನಡೆಸಿ ಕಾರಿನೊಂದಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎಂದು ವರದಿಯಾಗಿದೆ. ವ್ಯಕ್ತಿಯನ್ನು ಎಳೆದೊಯ್ದ ನಂತರ ತೀವ್ರಗಾಐಗೊಂಡ ಆತನನ್ನು ರಸ್ತೆ ಮಧ್ಯೆಯೇ ಬಿಟ್ಟು ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ಕೊಲೆ ಪ್ರಕರಣ ದಾಖಲು…
ಟ್ಯಾಕ್ಸಿ ಚಾಲಕನ ಹತ್ಯೆಗಾಗಿ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಹಂತಕರನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ. ಏತನ್ಮಧ್ಯೆ, ಘಟನೆಯ ಬಗ್ಗೆ ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement