ಡಿ.ಕೆ. ಶಿವಕುಮಾರ ಕಾಣೆಯಾಗಿದ್ದಾರೆ, ಹುಡುಕಿಕೊಟ್ಟವರಿಗೆ….: ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕುರಿತು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ‘ಡಿ.ಕೆ.ಶಿವಕುಮಾರ್​ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ’ ಎಂದು ಕಾಣೆಯಾದವರ ಜಾಹೀರಾತು ಮಾದರಿಯಲ್ಲಿ ಪೋಸ್ಟರ್​ ರಚಿಸಿ ಹಂಚಿಕೊಂಡಿದೆ.
“ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್‌ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು​ ನಾಪತ್ತೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ..ಹುಡುಕಿ ಕೊಟ್ಟವರಿಗೆ ಐದು ಉಚಿತ ಗ್ಯಾರಂಟಿ ಉಚಿತ, ಖಚಿತ, ನಿಶ್ಚಿತ” ಎಂದು ಬರೆದು ಡಿ.ಕೆ.ಶಿವಕುಮಾರ ಫೋಟೋ ಇರುವ ಪೋಸ್ಟರ್​ನೊಂದಿಗೆ ಬಿಜೆಪಿ ಲೇವಡಿ ಮಾಡಿದೆ.

‘ರಾಜ್ಯವನ್ನು ಕತ್ತಲೆಗೆ ದೂಡಿ ಕಾಣೆಯಾಗಿದ್ದಾರೆ” ಎಂಬ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರ ಭಾವಚಿತ್ರವುಳ್ಳ ಫೋಸ್ಟರ್ ರಾಜ್ಯ ಬಿಜೆಪಿ ಘಟಕ ಎಕ್ಸ್ ನಲ್ಲಿ ಬಿಡುಗಡೆ ಮಾಡಿತ್ತು. ಇಂಧನ ಸಚಿವರನ್ನು ಹುಡುಕಿ ಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಲೇವಡಿ ಮಾಡಿತ್ತು. ಗುರುವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕಾಣೆಯಾಗಿದ್ದಾರೆ ಎಂದು ಲೇವಡಿ ಮಾಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement