ಬೆಂಗಳೂರು: ಮುಂಬರುವ ಲೋಕಸಬೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಕರೆತರುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಶಾಕ್ ನೀಡಿದೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ನಾನು ಇಂದು ಕಾಂಗ್ರೆಸ್ ಸೇರಿದ್ದೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ರಾಮಪ್ಪ ಲಮಾಣಿ ಹೇಳಿದ್ದಾರೆ.
ಸಚಿವ ಎಚ್.ಕೆ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ