ಆಪರೇಷನ್‌ ಹಸ್ತ ; ಬೇರೆ ಬೇರೆ ಪಕ್ಷಗಳ 42ಕ್ಕೂ ಹೆಚ್ಚು ನಾಯಕರ ಅರ್ಜಿ ನನ್ನ ಮುಂದಿದೆ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು : ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಅವರ ಹೆಸರುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬೇರೆ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯ ಬಗ್ಗೆ ಚರ್ಚೆ ಮಾಡಿದ್ದಾರೆ.
ಬೇರೆ ಬೇರೆ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಬಳಿ ಇವೆ. ಆದರೆ ಅದರ ಬಗ್ಗೆ ಈಗ ಏನನ್ನೂ ಹೇಳುವುದಿಲ್ಲ ಎಂದರು.
ಸ್ಥಳೀಯ ನಾಯಕರುಗಳ ಜೊತೆ ಚರ್ಚೆ ಮಾಡಿ, ಒಮ್ಮತ ಮೂಡಿದ ನಂತರವೇ ಬೇರೆ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಅವರೆಲ್ಲ ಬಿಜೆಪಿ-ಜೆಡಿಎಸ್‌ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷ ಸೇರಲು ಮುಂದೆ ಬರುತ್ತಿದ್ದಾರೆ. ಇದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.
ಬಿಜೆಪಿಯ ಕೆಲವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಮಾಹಿತಿ ನೀಡುತ್ತಿದ್ದಾರೆ. ಆದರೆ ಈಗಲೇ ಈ ಬಗ್ಗೆ ಏನನ್ನೂ ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement