ಕಾರವಾರ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ದೂರು ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಷಯಕ್ಕೆ ಸಂಬಂಧಿಸಿ ಯುವ ಬ್ರೀಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ʼಜನ ಗಣ ಮನʼ ಅಭಿಯಾನ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರವಾರದ ಕಡವಾಡ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದಾರೆಂಬ ಆರೋಪ ಮೇಲೆ ಕಾರವಾರದ ಗ್ರಾಮೀಣ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ

ಪ್ರಮುಖ ಸುದ್ದಿ :-   ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement