ಕ್ರಿಕೆಟ್ ವಿಶ್ವಕಪ್ 2023: ಏಕದಿನದ ಪಂದ್ಯಗಳ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ ರೋಹಿತ್‌ ಶರ್ಮಾ

ಅಹಮದಾಬಾದ್‌ : ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಇತಿಹಾಸದಲ್ಲಿ ಮಹತ್ತರ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಆದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಸಮಯದಲ್ಲಿ ರೋಹಿತ್ ಶರ್ಮಾ ಕ್ರಿಕೆಟ್‌ ವೃತ್ತಿಜೀವನಕ್ಕೆ ಮತ್ತೊಂದು ಪ್ರಮುಖ ಮೈಲಿಗಲ್ಲು ಸೇರಿಸಿದರು.
ಅವರು ಏಕದಿನ ಕ್ರಿಕೆಟ್‌ನಲ್ಲಿ 300 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಆಗಿದ್ದಾರೆ. ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ವಿರುದ್ಧದ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯದಲ್ಲಿ ರೋಹಿತ್ ಅದ್ಭುತ ಬ್ಯಾಟಿಂಗ್‌ ಮಾಡಿ ಭಾರತದ ಗೆಲುವಿಗೆ ಕಾರಣರಾದರು. ಇನ್ನಿಂಗ್ಸ್‌ನಲ್ಲಿ ನಾಲ್ಕು ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಈ ಮೈಲಿಗಲ್ಲನ್ನು ತಲುಪಿಸದರು. ಒಟ್ಟಾರೆಯಾಗಿ, ಅವರು ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಮತ್ತು ಪಾಕಿಸ್ತಾನದ ಮಾಜಿ ಆಲ್ ರೌಂಡರ್ ಶಾಹಿದ್ ಅಫ್ರಿದಿ ಅವರ ಜೊತೆಯ ಕ್ಲಬ್‌ಗೆ ಸೇರಿಕೊಂಡರು. ಭಾರತದ ಪರವಾಗಿ ಎಂಎಸ್ ಧೋನಿ 229 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಏಕ ದಿನದ ಪಂದ್ಯಗಳಲ್ಲಿ 300+ ಸಿಕ್ಸರ್‌ ಹೊಡೆದ ಬ್ಯಾಟರ್
351 ಶಾಹಿದ್ ಅಫ್ರಿದಿ
331 ಕ್ರಿಸ್ ಗೇಲ್
300 ರೋಹಿತ್ ಶರ್ಮಾ*

ಪ್ರಮುಖ ಸುದ್ದಿ :-   ಮೈಚಾಂಗ್ ಚಂಡಮಾರುತ ತೀವ್ರ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ತೀವ್ರ ಮುನ್ನೆಚ್ಚರಿಕೆ

ಇದಕ್ಕೂ ಮೊದಲು, ಶನಿವಾರ ನಡೆದ ತಮ್ಮ ವಿಶ್ವಕಪ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಕೇವಲ 191 ರನ್‌ಗಳಿಗೆ ಆಲೌಟ್ ಮಾಡಿತು, ಪಾಕಿಸ್ತಾನ ಕೇವಲ 36 ರನ್‌ಗಳಿಗೆ ತಮ್ಮ ಕೊನೆಯ ಎಂಟು ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಬಾಬರ್ ಅಜಮ್ 50 ರನ್ ಗಳಿಸಿದರೆ, ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದರು.
ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು, ಪಾಕಿಸ್ತಾನ 155-2 ರಿಂದ ಕುಸಿದು 42.5 ಓವರ್‌ಗಳಲ್ಲಿ ಆಲೌಟ್ ಆಯಿತು. ನಿಗದಿತ ಗುರಿ ಬೆನ್ನಟ್ಟಿದ ಭಾರತ ಮೂರು ವಿಕೆಟ್‌ ನಷ್ಟದಲ್ಲಿ ಗುರಿ ಸಾಧಿಸಿತು. ರೋಹಿತ್‌ ಶರ್ಮಾ ೮೬ ರನ್‌ ಗಳಿಸಿದರೆ ಶ್ರೇಯಸ್‌ ಅಯ್ಯರ್‌ ಔಟಾಗದೆ ೫೩ ರನ್‌ಗಳಿಸಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement