ಸುಳ್ಳು ಪೋಸ್ಟ್‌ ಮಾಡಿದ ಆರೋಪ : ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ತುಮಕೂರು : ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಕುಂತಲಾ ನಟರಾಜ ಅವರು, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಆರೋಪಿಸಿ ಪೋಸ್ಟ್‌ ಹಂಚಿಕೊಂಡಿದ್ದರು. ಬಾಯ್ಕಾಟ್ ಲುಲುಮಾಲ್‌ ಎಂದು ಬರೆದಕೊಂಡಿದ್ದರು.
ಶಕುಂತಲಾ ಅವರು ಸುಳ್ಳು ಪೋಸ್ಟ್‌ ಹಾಕಿದ್ದಾರೆ ಮತ್ತು ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್‌ ಹಾಕಿದ್ದರು. ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement