ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನಗೆ ಕೊಕ್…!

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಈಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ.
ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯದ ಆಕ್ರೋಶ ಭುಗಿಲೆದ್ದಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದಿರುವ ದಸರಾ ಸಮಿತಿ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್ ನೀಡಿದೆ. ಅವರ ಬದಲಿಗೆ ಸಾಹಿತಿ ಡಾ. ಡಿಕೆ ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲು ಮುಂದಾಗಿದೆ.

ಮೈಸೂರಿನಲ್ಲಿ ನಡೆದ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಪ್ರೊ. ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಕುವೆಂಪು ಹೇಳಿದ್ದಾರೆ ಎಂದು ಮೂಲಕ ವಿವಾದ ಸೃಷ್ಟಿಸಿದ್ದರು. ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯ ಕೆರಳಿದ್ದು ಪ್ರತಿಭಟನೆ ಮಾಡುತ್ತಿದೆ.
ಮಹಿಷ ದಸರಾ ಆಚರಣೆ ಸಮಿತಿಯಿಂದ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟೆ ಎಂದು ಕುವೆಂಪು ಹೇಳುತ್ತಿದ್ದರು. ಆದರೆ, ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ. ಆದ್ದರಿಂದಲೇ ಕುವೆಂಪು, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು. ಇದು ನನ್ನ ಮಾತಲ್ಲ ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement