ಕಂಟೈನರ್‌ ಗೆ ಮಿನಿ ಬಸ್ ಡಿಕ್ಕಿ : 12 ಮಂದಿ ಸಾವು, 23 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು. ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಕಂಟೇನರ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನ್ನೆರಡು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.
23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement