ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಆಹಾರ ಆರೋಗ್ಯದ ವಿಚಾರದಲ್ಲಿ ಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7:30 ಕ್ಕೆ ನಿಧನರಾಗಿದ್ದಾರೆ. ಎಂದು ಅವರ ಪತ್ನಿ ಮಾಹಿತಿ ನೀಡಿದ್ದಾರೆ.
ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು.
ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು.
ಪ್ರಚಲಿತ ವಿದ್ಯಾಮಾನಗಳ ಬಗ್ಗೆಯೂ ಉತ್ತಮವಾದ ಅರಿವು ಹೊಂದಿದ್ದ ರಘು ಅನೇಕ ಟಿವಿ ವಿಶ್ಲೇಷಣೆಗಳಲ್ಲಿ ಭಾಗಿಯಾಗುತ್ತಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ