ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಂ.ಎಸ್. ಗಿಲ್ ನಿಧನ

ನವದೆಹಲಿ: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಮತ್ತು ಮಾಜಿ ಕೇಂದ್ರ ಸಚಿವ ಮನೋಹರ್ ಸಿಂಗ್ ಗಿಲ್ (86) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅವರ ಕುಟುಂಬ ಸದಸ್ಯರ ಪ್ರಕಾರ, ಇಂದು ಸೋಮವಾರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಲೋದಿ ರಸ್ತೆಯ ಸ್ಮಶಾನದಲ್ಲಿ ಗಿಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ಚುನಾವಣಾ ಆಯೋಗವು ತನ್ನ 11 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ ಮನೋಹರ್ ಸಿಂಗ್ ಗಿಲ್ (ಎಂ.ಎಸ್‌. ಗಿಲ್) ಅವರ ನಿಧನದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಆಯೋಗವು ಅವರನ್ನು “ಭಾರತೀಯ ಆಡಳಿತ ಸೇವೆಗಳು, ಪಂಜಾಬ್ ಕೇಡರ್‌ನ 1958 ರ ಬ್ಯಾಚ್‌ನ ಅದ್ಭುತ ಅಧಿಕಾರಿ” ಎಂದು ಬಣ್ಣಿಸಿದೆ.
ಎಂ.ಎಸ್. ಗಿಲ್ ಯಾರು..?
ಎಂ.ಎಸ್. ಗಿಲ್ ಅವರು ಪಂಜಾಬಿನ ತರಣ್‌ ತಾರಣ್ ಜಿಲ್ಲೆಯ ಅಲ್ಲಾದೀನಪುರ ಗ್ರಾಮದಲ್ಲಿ ಜನಿಸಿದರು. ಮಾಜಿ ಅಧಿಕಾರಿ, ಗಿಲ್ ಶಿರೋಮಣಿ ಅಕಾಲಿದಳದ ಪ್ರಕಾಶ ಸಿಂಗ್‌ ಬಾದಲ್‌ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಯುವ ಅಧಿಕಾರಿಯಾಗಿ ಅವರ ಅಡಿಯಲ್ಲಿ ಸೇವೆ ಸಲ್ಲಿಸಿದರು.
ಅವರು 1958 ರಲ್ಲಿ ಆಡಳಿತಾತ್ಮಕ ಸೇವೆಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಅವರು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತರಾಗುವವರೆಗೂ ಸೇವೆ ಸಲ್ಲಿಸಿದರು. ಅವರು 1996 ರಿಂದ 2001 ರವರೆಗೆ ಭಾರತದ ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದರು.
ಟಿ.ಎನ್. ಶೇಷನ್ ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದಾಗ ಗಿಲ್ ಮತ್ತು ಜಿವಿಜಿ ಕೃಷ್ಣಮೂರ್ತಿ ಅವರನ್ನು ಚುನಾವಣಾ ಆಯೋಗದ ಸದಸ್ಯರನ್ನಾಗಿ ಮಾಡಲಾಯಿತು. ಆಗ ಚುನಾವಣಾ ಸಮಿತಿ ಬಹುಸದಸ್ಯ ಸಂಸ್ಥೆಯಾಯಿತು. ಗಮನಾರ್ಹವೆಂದರೆ, ಅವರು ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಅವಧಿಯಲ್ಲಿ ಚುನಾವಣಾ ಆಯೋಗವು ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಪರಿಚಯಿಸಿತು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

ನಿವೃತ್ತಿಯ ನಂತರ ಕಾಂಗ್ರೆಸ್ ಸೇರಿದರು…
ಅವರ ನಿವೃತ್ತಿಯ ನಂತರ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. ಗಿಲ್ ಬಹುಶಃ ರಾಜಕೀಯಕ್ಕೆ ಸೇರಿದ ಮೊದಲ ಮಾಜಿ ಮುಖ್ಯ ಚುನಾವಣಾ ಆಯುಕ್ತರು. ಗಿಲ್ ಕಾಂಗ್ರೆಸ್ ಸದಸ್ಯರಾಗಿ ರಾಜ್ಯಸಭೆ ಪ್ರವೇಶಿಸಿದರು. ಅವರು ಪಂಜಾಬ್ ಅನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. ಅವರು 2004 ರಿಂದ 2016 ರವರೆಗೆ ಎರಡು ಯಶಸ್ವಿ ಅವಧಿಗೆ ಈ ಸ್ಥಾನವನ್ನು ಹೊಂದಿದ್ದರು. 2008 ರಲ್ಲಿ ಕೇಂದ್ರ ಕ್ರೀಡಾ ಸಚಿವರನ್ನಾಗಿ ಮಾಡಲಾಯಿತು. ಗಿಲ್ ಅವರು ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರಾಗಿ ಹಾಗೂ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನದ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾಗಿದ್ದ ಅವಧಿಯಲ್ಲಿ ಭಾರತವು 2010 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ನವದೆಹಲಿಯಲ್ಲಿ ಆಯೋಜಿಸಿತ್ತು.
ಎಂ.ಎಸ್‌. ಗಿಲ್ ಅವರು ನಾಗರಿಕ 2000 ರಲ್ಲಿ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪುರಸ್ಕಾರ ಪಡೆದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement