ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.
230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕಮಲನಾಥ ಅವರು ಚಿಂದ್ವಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರ ಜೈವರ್ಧನ ಸಿಂಗ್‌ ರಾಗಿಗತ್‌ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಛತ್ತೀಸಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪಟಾನ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ಅವರಿಗೆ ಅಂಬಿಕಾಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಾಗಿದೆ. ಛತ್ತೀಸಗಢದಲ್ಲಿ ವಿಧಾನಸಭಾ ಚುನಾವಣೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥೆ ಅನುಮಾಲಾ ರೇವಂತ್ ರೆಡ್ಡಿ ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸಿಎಲ್‌ಪಿ ನಾಯಕ ವಿಕ್ರಮಾರ್ಕ ಮಲ್ಲು ಮದಿರಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement