ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅಕ್ಟೋಬರ್‌ 16 ರಿಂದ 19ರವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಅಕ್ಟೋಬರ್‌ 17ರಂದು ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಭಾಋೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಯೆಲ್ಲೊ ಅಲರ್ಟ್‌ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಆರಂಭವಾದ ತುಂತುರು ಮಳೆ ರಾತ್ರಿ ಪೂರ್ತಿ ಮುಂದುವರೆದಿತ್ತು. ಅಂತೆಯೇ ಭಾನುವಾರ ಬೆಳಿಗ್ಗೆಯೂ ಕೆಲವೆಡೆ ಹನಿ ಮಳೆಯಾಗಿದೆ. ಮುಂದಿನ ಎರಡು ದಿನ ಮೋಡ ಮುಚ್ಚಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement