ಯಲ್ಲಾಪುರ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಕಾರ್ ತಿರುಗಿದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4.7 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ನಿಮ್ಮ ಕಾಮೆಂಟ್ ಬರೆಯಿರಿ

advertisement