ಅತ್ತಿಬೆಲೆ ಅಗ್ನಿ ದುರಂತ : ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿಯಲ್ಲಿ ಸಂಭವಿಸಿದ ಅಗ್ನಿ ದುರಂತ (Fire Accident)ದಲ್ಲಿ 16 ಮಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮಲಾನ್​ ಆದಿತ್ಯಾ ಬಿಸ್ವಾಸ್ ಅವರನ್ನು ನೇಮಿಸಿದೆ. ಅಗ್ನಿ ದುರಂತ ಪ್ರಕರಣ ಸಂಬಂಧ ಮೂರು ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ವಿಚಾರಣಾಧಿಕಾರಿಗೆ ಸರ್ಕಾರ ಸೂಚನೆ ನೀಡಿದೆ.
ಅಕ್ಟೋಬರ್ 7 ರಂದು ಸಂಜೆ 3:30 ರ ವೇಳೆಗೆ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಘಟನೆ ಸಂಬಂಧ ಶ್ರೀ ಬಾಲಜಿ ಟ್ರೇಡರ್ಸ್ ಪಟಾಕಿ ಮಳಿಗೆ ಮಾಲೀಕ ರಾಮಸ್ವಾಮಿ ರೆಡ್ಡಿ, ಅವರ ಮಗ ನವೀನ್ ರೆಡ್ಡಿ ಅವರನ್ನು ಬಂಧಿಸಲಾಗಿತ್ತು. ಜಾಗದ ಮಾಲೀಕ ಅನಿಲ್ ರೆಡ್ಡಿ ಸೇರಿದಂತೆ ಇತರರ ವಿರುದ್ದ ಎಫ್‌ಐಆರ್‌ (FIR) ದಾಖಲಾಗಿತ್ತು. ಸದ್ಯ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement