2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಮತ್ತು ಸಾರ್ವಜನಿಕರು ಬೆಂಕಿಯನ್ನು ನಂದಿಸಿದ್ದಾರೆ. ರಂಗಪಾಳ್ಯಂನಲ್ಲಿರುವ ಪಟಾಕಿ ಘಟಕದಲ್ಲಿ ಹಠಾತ್ ಸ್ಫೋಟದಿಂದ ಏಳು ಸುಟ್ಟ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅವರ ಗುರುತುಗಳನ್ನು ಇನ್ನೂ ಪತ್ತೆಯಾಗಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಮಿಕರು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟಕದಿಂದ ರಕ್ಷಿಸಲ್ಪಟ್ಟ ಮೂವರು ವ್ಯಕ್ತಿಗಳು ತೀವ್ರ ಸುಟ್ಟ ಗಾಯದಿಂದ ಮೃತಪಟ್ಟಿದ್ದಾರೆ.
ಕಿಚ್ಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕದಲ್ಲಿ ನಡೆದ ಮತ್ತೊಂದು ಘಟನೆಯಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಆತನನ್ನು ವೆಂಬು (35) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳಾ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಶ್ರೀವಿಲ್ಲಿಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಸಮುದ್ರದಲ್ಲಿ ಮುಳುಗಿ ನೀರಿನೊಳಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement