ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಚಂಡಮಾರುತದ ಪರಿಚಲನೆಯಿಂದ ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಹಾಗೂ ಕೇರಳದ ಕೆಲಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 21 ರ ವೇಳೆಗೆ ಚಂಡಮಾರುತದ ಪರಿಚಲನೆಯಿಂದಾಗಿ ಕೇರಳದಲ್ಲಿ ಮುಂದಿನ 5 ದಿನಗಳ ವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಅರೇಬಿಯನ್ ಸಮುದ್ರದಲ್ಲಿರುವ ಚಂಡಮಾರುತದ ಪರಿಚಲನೆಯಿಂದ ತಮಿಳುನಾಡು, ಕರ್ನಾಟಕದ ದಕ್ಷಿಣ ಭಾಗಕ್ಕೆ ಮಳೆಯಾಗಲಿದ್ದರೆ ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ಪ್ರಭಾವ ಕೇರಳದ ಕರಾವಳಿ ಭಾಗದ ಮೇಲೆ ಮಳೆಯ ಪ್ರಭಾವ ಇರಲಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ರಾಮನಗರ   ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಲ್ಲದೆ, ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು ಮತ್ತು ಕೇರಳದ ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement